

ನೆಲ್ಯಾಡಿ: ನೆಲ್ಯಾಡಿ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯು ತನ್ನ 75ನೇ ವರ್ಷಾಚರಣೆಯ ಮಹೋತ್ಸವದ ಅಂಗವಾಗಿ ಗುರುವಾರ ದಂದು ಎಸ್‌ಡಿಎಂಸಿ, ಜನಪ್ರತಿನಿಧಿಗಳು, ಊರ ವಿದ್ಯಾಭಿಮಾನಿಗಳು, ಪೂರ್ವ ವಿದ್ಯಾರ್ಥಿಗಳು ಹಾಗೂ ಪೋಷಕರ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಎಸ್‌ಡಿಎಂಸಿ ಅಧ್ಯಕ್ಷ ದಿನಕರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ನಸೀಮಾ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಸ್ಮಾಯಿಲ್ ನೋಟರಿ ವಕೀಲ, ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಲಾಂ ಬಿಲಾಲ್, ಶಾಲೆಯ ಮುಖ್ಯ ಶಿಕ್ಷಕಿ ವೀಣಾ ಮಸ್ಕರೇನಸ್ ಉಪಸ್ಥಿತರಿದ್ದರು.
ಸಭೆಯಲ್ಲಿ 75ನೇ ವರ್ಷಾಚರಣೆಯ ಅಂಗವಾಗಿ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸರ್ವೋತ್ತಮ ಗೌಡ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎಲೈಟ್ ರಬ್ಬರ್ ಇಂಡಸ್ಟ್ರಿಯ ಶಾಜಿ ವರ್ಗೀಸ್, ಕಾರ್ಯಧ್ಯಕ್ಷರಾಗಿ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಉಪಾಧ್ಯಕ್ಷರಾಗಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್, ಟಿಟ್ಟಿ, ಕೌಕ್ರಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಇಬ್ರಾಹಿಂ ಎಂ.ಕೆ, ಶಿಲ್ಪ ಕಾಂಪ್ಲೆಕ್ಸ್ ಮಾಲಕ ಶಿವಣ್ಣ ಪಿ. ಹೆಗ್ಡೆ, ಕೌಕ್ರಾಡಿ ಗ್ರಾ.ಪಂ. ಸದಸ್ಯ ಹನೀಫ್ ಕರಾವಳಿ ಅವರನ್ನು ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಶಿಕ್ಷಕ ವಿಮಲ್ ಕುಮಾರ್, ಜೊತ ಕಾರ್ಯದರ್ಶಿಗಳಾಗಿ ನೆಲ್ಯಾಡಿ ಗ್ರಾ.ಪಂ. ಸದಸ್ಯ ಅಬ್ದುಲ್ ಜಬ್ಬಾರ್, ಅಪೂರ್ವ, ಶಿಕ್ಷಕಿ ರಶ್ಮಾ, ತ್ರೇಸಿಯಮ್ಮ, ಸವಿತ – ಕೋಶಾಧಿಕಾರಿಯಾಗಿ ರವಿಚಂದ್ರ ಹೊಸವಕ್ಲು, ಸ್ವಾಗತ ಸಮಿತಿ ಸಂಚಾಲಕರಾಗಿ ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್, ಸಾಂಸ್ಕೃತಿಕ ಸಮಿತಿ ಸಂಚಾಲಕರಾಗಿ ದಯಾನಂದ ವಾಣಿಶ್ರೀ, ಅಭಿವೃದ್ಧಿ ಸಮಿತಿಯ ಸಂಚಾಲಕರಾಗಿ ಮುರಳಿಧರ, ಕ್ರೀಡಾ ಸಮಿತಿಯ ಸಂಚಾಲಕರಾಗಿ ನಿವೃತ್ತ ದೈಹಿಕ ಶಿಕ್ಷಕ ಜನಾರ್ದನ, ಆಹಾರ ಸಮಿತಿಯ ಸಂಚಾಲಕರಾಗಿ ವಿಶ್ವನಾಥ, ಸ್ಮರಣ ಸಂಚಿಕೆಯ ಸಂಚಾಲಕರಾಗಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಬಲ್ಯ, ಪ್ರಚಾರ ಸಮಿತಿಯ ಸಂಚಾಲಕರಾಗಿ ಪ್ರಶಾಂತ್ ಸಿ.ಎಚ್ ಹಾಗೂ ಅಲಂಕಾರ ಸಮಿತಿಯ ಸಂಚಾಲಕರಾಗಿ ಸ್ವರ್ಣಲತಾ, ಸ್ವಯಂಸೇವಕರ ಸಮಿತಿ ಸಂಚಾಲಕರಾಗಿ ಕೃಷ್ಣಪ್ಪ ನಿಡೋಡಿ ಅವರನ್ನು ಆಯ್ಕೆ ಮಾಡಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ವೀಣಾ ಮಸ್ಕರೇನಸ್ ಸ್ವಾಗತಿಸಿದರು. ಶಿಕ್ಷಕ ವಿಮಲ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.






