ಅವಕಾಶವನ್ನು ಬಳಸಿಕೊಂಡಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ -ಲ.ಎಂ.ಬಿ ಸದಾಶಿವ

ಶೇರ್ ಮಾಡಿ

ನೇಸರ ಮಾ.13: ವಿದ್ಯಾರ್ಥಿ ಸಂಘ ಕಾಲೇಜಿನ ಏಳಿಗೆಯ ದೃಷ್ಟಿಯಿಂದ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ. ಪ್ರತಿಯೊಬ್ಬರು ಅವರವರ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ತಮಗೆ ಕೊಟ್ಟ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ ಸಿಕ್ಕಿದ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು, ಎಲ್ಲರೂ ಜೊತೆಯಾಗಿ ಹೆಜ್ಜೆಯಿರಿಸಿದಾಗ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಲಯನ್ ಎಂ.ಬಿ.ಸದಾಶಿವ ಅವರು ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ 2021 – 22 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ), ಸುಳ್ಯ ಇದರ ಅಧ್ಯಕ್ಷರಾದ ಡಾ.ಚಿದಾನಂದ ಕೆ.ವಿ ಅವರು ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಶಿಕ್ಷಣ ದೊರೆತಾಗ ಸುಶಿಕ್ಷಿತ ಭಾರತ ನಿರ್ಮಾಣ ಸಾಧ್ಯ ಎಂದು ಮನಗಂಡು ನಿರ್ಮಾಣಗೊಂಡ ಈ ಸಂಸ್ಥೆಯಲ್ಲಿ ಉತ್ತಮ ನಾಯಕತ್ವ ಗುಣಗಳನ್ನು ಅಳವಡಿಸಿಕೊಂಡು, ಉನ್ನತ ಜ್ಞಾನ ಸಂಪಾದನೆಯ ಮೂಲಕ ಯಶಸ್ವಿ ವಿದ್ಯಾರ್ಥಿಯಾಗಿ ಹೊರಬನ್ನಿ ಎಂದರು.

ವೀಕ್ಷಿಸಿ Subscribers ಮಾಡಿ

ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಬಾಲಚಂದ್ರ ಗೌಡ, ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್.ಎಂ.ಎಂ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಾರ್ಯದರ್ಶಿ ಹೇಮನಾಥ. ಕೆ.ವಿ, ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ನೀಲಂಬಿಕೈ ನಟರಾಜನ್, ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಪ್ರತೀಕ್ಷಾ ಕೆ ಬಿ, ಜತೆ ಕಾರ್ಯದರ್ಶಿ ಲಾವಣ್ಯ ಜೆ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿನಿಯರಾದ ರತ್ನ ಸಿಂಚನ, ಅನಘ ಹಾಗೂ ನಿರೀಕ್ಷಾ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭರತ್ ಎಂ ಎಲ್ ಸ್ವಾಗತಿಸಿ, ಕಾರ್ಯದರ್ಶಿ ಶ್ರೀಶ್ಯಾಮ್ ಎಸ್ ಪ್ರಸಾದ್ ವಂದಿಸಿದರು. ಕನ್ನಡ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ‌ ಉಪನ್ಯಾಸಕ ವೃಂದದವರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

—ಜಾಹೀರಾತು—

Leave a Reply

error: Content is protected !!