

ಬೆಳ್ತಂಗಡಿ: ಜಿಲ್ಲೆಯ ವಿವಿಧಡೆ ಪೊಲೀಸ್ ಠಾಣೆಯಲ್ಲಿ ಸುಮಾರು 32ಕ್ಕೂ ಅಧಿಕ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೊಡಿ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದೆ.
ಪುತ್ತೂರು ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿ ಆಧಾರದಲ್ಲಿ ಸೆ.20ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರುಷಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಮಾಡಲಾಗಿದೆ.






