

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ನೆಲ್ಯಾಡಿ ವಲಯದ ಕುಡ್ತಾಜೆ ಕಾರ್ಯಕ್ಷೇತ್ರಕ್ಕೆ ಸೇರಿದ ಬೃಂದಾವನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವು ಪುಚ್ಚೇರಿ ಪ್ರಾಥಮಿಕ ಶಾಲೆ ಮಾದೇರಿಯಲ್ಲಿ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ಉದ್ಘಾಟಿಸಿದರು. ಮಹಿಳೆಯರು ವೈಯಕ್ತಿಕ ಹಾಗೂ ಸಾಮಾಜಿಕವಾಗಿ ತೊಡಗಿಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ಜ್ಞಾನವಿಕಾಸ ಕಾರ್ಯಕ್ರಮ ದೊಡ್ಡ ಮಟ್ಟದಲ್ಲಿ ಸಹಕಾರಿಯಾಗಿದೆ ಎಂದು ಅವರು ಮಾರ್ಗದರ್ಶನ ನೀಡಿದರು.
ಸಭಾಧ್ಯಕ್ಷತೆಯನ್ನು ಕೇಂದ್ರದ ಸದಸ್ಯೆ ಸೀತಾ ವಹಿಸಿದರು. ಅತಿಥಿಗಳಾಗಿ ನೆಲ್ಯಾಡಿ ಜೆಸಿಐ ನಿಕಟಪೂರ್ವ ಅಧ್ಯಕ್ಷೆ ಸುಚಿತ್ರ ಜೆ. ಬಂಟ್ರಿಯಾಲ್ ಭಾಗವಹಿಸಿ ಮಹಿಳೆಯರ ಕಲೆ, ಕೌಶಲ್ಯಗಳನ್ನು ಉತ್ತೇಜಿಸುವ ರೀತಿಯ ಪ್ರೋತ್ಸಾಹದ ಮಾತುಗಳನ್ನಾಡಿದರು.
ವೇದಿಕೆಯಲ್ಲಿ ನೆಲ್ಯಾಡಿ ವಲಯ ಅಧ್ಯಕ್ಷರು ಕುಶಾಲಪ್ಪ ಗೌಡ ಪಿ.ಎನ್, ಪುಚ್ಚೇರಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರು ಯಶವಂತ ತೋಟ, ಮಾದೇರಿ ಒಕ್ಕೂಟದ ಅಧ್ಯಕ್ಷರು ಸೆಬಾಸ್ಟಿಯನ್ ಪಿ.ಜೆ, ಕಡಬ ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ, ನೆಲ್ಯಾಡಿ ವಲಯ ಮೇಲ್ವಿಚಾರಕರು ಆನಂದ ಡಿ.ಬಿ, ಬೃಂದಾವನ ಜ್ಞಾನವಿಕಾಸ ಕೇಂದ್ರ ಸಂಯೋಜಕಿ ಯಶ್ವಿನಿ ಉಪಸ್ಥಿತರಿದ್ದರು.
ನೆಲ್ಯಾಡಿ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರು, ಶೌರ್ಯ ತಂಡದ ಪ್ರತಿನಿಧಿಗಳು, ಸೇವಾ ಪ್ರತಿನಿಧಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಮಾದೇರಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದ ಭಾಗವಹಿಸಿದರು.
ನಳಿನಾಕ್ಷಿ ಕುಡ್ತಾಜೆ ಕಾರ್ಯಕ್ರಮ ನಿರೂಪಿಸಿದರು . ಕುಸುಮ ಸ್ವಾಗತಿಸಿದರು, ಸೇವಾ ಪ್ರತಿನಿಧಿ ಕವಿತಾ ವಂದಿಸಿದರು. ಮಾದೇರಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸಂತೋಷ್ ಕಾರ್ಯಕ್ರಮಕ್ಕೆ ಸಹಕರಿಸಿದರು.
ಸಭಾ ಕಾರ್ಯಕ್ರಮದ ನಂತರ ಕೇಂದ್ರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಮನ್ವಯಾಧಿಕಾರಿ ಚೇತನ ಉದ್ಘಾಟಿಸಿದರು.






