ಜಿಲ್ಲಾಮಟ್ಟದ ನೆಟ್‍ಬಾಲ್ ಕ್ರೀಡಾಕೂಟ- ಕಾಂಚನ ಪ್ರೌಢಶಾಲೆ ರಾಜ್ಯಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ನೆಲ್ಯಾಡಿ: ದ.ಕ.ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ(ಆಡಳಿತ) ದ.ಕ., ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ಆಶ್ರಯದಲ್ಲಿ ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ದ.ಕ.ಜಿಲ್ಲಾಮಟ್ಟದ ನೆಟ್‍ಬಾಲ್ ಕ್ರೀಡಾಕೂಟದ 14ರ ವಯೋಮಾನದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆ ಆಡಳಿತಕ್ಕೊಳಪಟ್ಟ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಯ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ಶಾಲಾ ಮುಖ್ಯಶಿಕ್ಷಕ ರಮೇಶ್ ಮಯ್ಯ ಅವರ ಮಾರ್ಗದರ್ಶನದಲ್ಲಿ ದೈಹಿಕಶಿಕ್ಷಣ ಶಿಕ್ಷಕ ಹೇಮೋಧರ್ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

  •  

Leave a Reply

error: Content is protected !!