


ಕೊಕ್ಕಡ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಎಂದು ಗುರುತಿಸಲಾಗಿದೆ. ಮೃತನು ವಿಪರೀತ ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ. ಅಕ್ಟೋಬರ್ 17ರ ರಾತ್ರಿ ಮನೆಯಲ್ಲಿದ್ದಾಗ ವಿಷ ಸೇವಿಸಿದ ಅನುರಾಜ್ ಅವರನ್ನು ಕುಟುಂಬದವರು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆತ ಅಕ್ಟೋಬರ್ 18ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.
ಈ ಸಂಬಂಧ ಮೃತನ ಸಹೋದರ ಬಾಬು ನೀಡಿದ ದೂರಿನ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






