ನೇಸರ ಮಾ.14:ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿದ್ಯಾರ್ಥಿಗಳಿಗೆ ನಾಗರಿಕ ಸೇವೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಮಾ.14ರಂದು ನಡೆಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಸಂಸ್ಥೆಯ ಸಂಚಾಲಕರಾದ ಅಬ್ರಹಾಂ ವರ್ಗೀಸ್ ರವರು ಉದ್ಘಾಟಿಸಿ ಗ್ರಾಮೀಣ ವಿದ್ಯಾರ್ಥಿಗಳು ಈ ರೀತಿಯ ತರಬೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪರೀಕ್ಷೆಯನ್ನು ಎದುರಿಸಲು ಹಾಗೂ ಪೂರ್ವ ತಯಾರಿ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಸರ್ವಜ್ಞ ಅಕಾಡೆಮಿ ಮಂಗಳೂರಿನ ನಿರ್ದೇಶಕರಾದ ಸುರೇಶ್ ಎಂ.ಎಸ್ ತರಬೇತಿಯನ್ನು ನೀಡಿದರು.
ಎನ್ಎಸ್ಎಸ್ ಗೀತೆಯ ಮೂಲಕ ಕಾರ್ಯಕ್ರಮವು ಆರಂಭಗೊಂಡಿತು. ಎನ್ಎಸ್ಎಸ್ ನ ಯೋಜನಾಧಿಕಾರಿ ವಿಶ್ವನಾಥ ಶೆಟ್ಟಿ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು, ಎನ್ಎಸ್ಎಸ್ ನಾಯಕಿ ಭವಿಷ್ಯ ರವರು ತರಬೇತುದಾರರ ಪರಿಚಯವನ್ನು ಸಭೆಗೆ ಮಾಡಿದರು. ಎನ್ಎಸ್ಎಸ್ ನ ವಿದ್ಯಾರ್ಥಿ ನಾಯಕ ವಿನೀತ್ ಮೊಂತೆರೋ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಗ್ರೀಷ್ಮ ವಂದಿಸಿದರು. ತರಬೇತಿ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಗಳು ಹಾಗೂ ಉಪನ್ಯಾಸಕರು ಪಾಲ್ಗೊಂಡರು.