ಶಿಸ್ತುಬದ್ಧ ಕಲಿಕೆ ಹಾಗೂ ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಜ್ಞಾನಾರ್ಜನೆ ಮಾಡಿದಾಗ ಯಶಸ್ಸು ಸಾಧ್ಯ – ಕಡಬ ಆರಕ್ಷಕ ಠಾಣೆಯ ಉಪನಿರೀಕ್ಷಕ ರುಕ್ಮಯ ನಾಯ್ಕ

ಶೇರ್ ಮಾಡಿ

ನೇಸರ ಮಾ.14: ನೇಸರ ಮಾ.14: ಬೆಥನಿ ಸಂಯುಕ್ತ ಪ.ಪೂ.ಕಾಲೇಜು ನೂಜಿಬಾಳ್ತಿಲದಲ್ಲಿ 2021-22ನೇ ಸಾಲಿನ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಾ.14ರಂದು ನಡೆಯಿತು. ಕಡಬ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ರುಕ್ಮಯ ನಾಯ್ಕ ಆಗಮಿಸಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಸ್ತುಬದ್ಧ ಕಲಿಕೆ ಹಾಗೂ ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಜ್ಞಾನಾರ್ಜನೆ ಮಾಡಿದಾಗ ಯಶಸ್ಸು ಸಾಧ್ಯ ಎಂಬುದಾಗಿ ತಿಳಿಸಿದರು. ಸಂಸ್ಥೆಯ ಸಂಚಾಲಕರಾದ ರೆ.ಪಾ.ಸತ್ಯನ್ ತೋಮಸ್ ಓಐಸಿ ಅಧ್ಯಕ್ಷತೆ ವಹಿಸಿ ಮಾತನಾಡಿ ಕಳೆದ 40 ವರ್ಷಗಳಿಂದ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆ ಫಲಿತಾಂಶದಲ್ಲಿ ಗುಣಮಟ್ಟವನ್ನು ಕಾಪಾಡಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.

ವೀಕ್ಷಿಸಿ Subscribers ಮಾಡಿ

ಸಂಸ್ಥೆಯ 2021-22 ನೇ ಸಾಲಿನ ವಾರ್ಷಿಕ ವರದಿಯನ್ನು ಪ್ರಾಂಶುಪಾಲರಾದ ಜಾರ್ಜ್ ಟಿ.ಎಸ್ ವಾಚಿಸಿದರು. ಸ್ಥಳೀಯ ಸಂಚಾಲಕರಾದ ರೆ.ಪಾ.ಸಖರಿಯಾಸ್ ಓಐಸಿ ಶುಭ ಹಾರೈಸಿದರು. ಶಿಕ್ಷಕರಾದ ತೋಮಸ್ ಎ.ಕೆ. ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ಭಟ್ ವಂದಿಸಿದರು. ಉಪನ್ಯಾಸಕಿ ಬೀನಾ ಜಾರ್ಜ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಆ್ಯನಿ ತೋಮಸ್ ಹಾಗೂ ಸುಮಿತ.ಕೆ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

—ಜಾಹೀರಾತು—

Leave a Reply

error: Content is protected !!