ಹಿಜಾಬ್ ತೀರ್ಪು ಹಿನ್ನೆಲೆ ದ.ಕ. ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲಾ, ಕಾಲೇಜುಗಳಿಗೆ ರಜೆ

ನೇಸರ ಮಾ.14: ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಹಿಜಾಬ್ ಪ್ರಕರಣದ ತೀರ್ಪನ್ನು ಹೈಕೋರ್ಟ್ ಮಾ.15ರಂದು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಿಗೆ, ಅಂಗನವಾಡಿಗಳಿಗೆ ಮಾ.15ರಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಉಭಯ ಜಿಲ್ಲೆಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಬಾಹ್ಯ ಪರೀಕ್ಷೆಗಳು ಇದ್ದರೆ ನಿಗದಿಯಂತೆ ನಡೆಯಲಿದ್ದು, ಆಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವೀಕ್ಷಿಸಿ Subscribers ಮಾಡಿ

Leave a Reply

error: Content is protected !!