

ಕಡಬ: ಹದಿನಾಲ್ಕು ವರ್ಷದ ಶಾಲಾ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ.
ನೂಜಿಬಾಳ್ತಿಲ ಗ್ರಾಮದ ಖಂಡಿಗ ಲೋಕೇಶ್ ಅವರ ಪುತ್ರ ಗಗನ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ.
ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಗಗನ್, ಗುರುವಾರದಂದು ಎಂದಿನಂತೆ ಶಾಲೆಗೆ ತೆರಳಿ ಸಂಜೆ ಮನೆಗೆ ಬಂದಿದ್ದಾನೆ. ಬಳಿಕ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಘಟನೆಯ ನಿಖರ ಕಾರಣ ತಿಳಿದುಬಂದಿಲ್ಲ. ಕಡಬ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇರಿಸಲಾಗಿದೆ.






