ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣದ ಸಂಭ್ರಮಪ್ರತಿಭಾ ದಿನಾಚರಣೆಯಲ್ಲಿ ಯಕ್ಷಗಾನ ‘ಮೇದಿನಿ ನಿರ್ಮಾಣ’ ಪ್ರದರ್ಶನ

ಶೇರ್ ಮಾಡಿ

ಕೊಕ್ಕಡ : ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಪ್ರತಿಭಾ ದಿನಾಚರಣೆಯ ಸಂದರ್ಭದಲ್ಲಿ ಯಕ್ಷ ಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ವತಿಯಿಂದ ಯಕ್ಷ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಂದ ಮನಮುಟ್ಟುವ ಪೂರ್ವರಂಗ ಹಾಗೂ ಯಕ್ಷಗಾನ ‘ಮೇದಿನಿ ನಿರ್ಮಾಣ’ ಪ್ರದರ್ಶನವನ್ನು ಯಶಸ್ವಿಯಾಗಿ ಮಂಡಿಸಲಾಯಿತು. ಒಟ್ಟು 30 ವಿದ್ಯಾರ್ಥಿಗಳು ಈ ಕಲಾಪ್ರದರ್ಶನದಲ್ಲಿ ಭಾಗವಹಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ ಸಂಚಾಲಕ ವಾಸುದೇವ ಐತಾಳ್ ಅವರು, ಪಟ್ಲ ಫೌಂಡೇಶನ್ ವತಿಯಿಂದ ಶಾಲೆಗಳಲ್ಲಿ ನಡೆಯುತ್ತಿರುವ ಯಕ್ಷ ಶಿಕ್ಷಣ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು. ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಯಕ್ಷ ಶಿಕ್ಷಣ ನಿರಂತರವಾಗಿ ನಡೆಯುತ್ತಿದ್ದು, ಮಕ್ಕಳಿಗೆ ಸಂಸ್ಕೃತಿ ಮತ್ತು ಶಿಸ್ತಿನ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉತ್ಸಾಹದಿಂದ ಪಾಲ್ಗೊಳ್ಳುವಂತೆ ಪೋಷಕರು ಕೂಡ ಮಕ್ಕಳನ್ನು ಪ್ರೇರೇಪಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಯಕ್ಷ ಶಿಕ್ಷಣಕ್ಕೆ ಪ್ರೋತ್ಸಾಹವಾಗಿ ಫೌಂಡೇಶನ್ ವತಿಯಿಂದ ಶಾಲೆಗೆ ರೂ.15,000 ಮೊತ್ತದ ಚೆಕ್ ಅನ್ನು ನೀಡಲಾಯಿತು. ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಯಕ್ಷಕಲೆಯ ಉಳಿವು ಮತ್ತು ವಿಕಾಸಕ್ಕೆ ಇಂತಹ ಪ್ರಯತ್ನಗಳು ಅತ್ಯಂತ ಅಗತ್ಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಯಕ್ಷ ಶಿಕ್ಷಕ ಈಶ್ವರ ಪ್ರಸಾದ್, ಶಾಲೆಯ ಮುಖ್ಯಶಿಕ್ಷಕರು, ಸಹ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಈ ಸಂದರ್ಭದಲ್ಲಿ ಯಕ್ಷಗುರು ಈಶ್ವರ ಪ್ರಸಾದ್ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

  •  

Leave a Reply

error: Content is protected !!