ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಇವಾನಿಯ ಕೆ. ಪ್ರವೀಣ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶೇರ್ ಮಾಡಿ

ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿನಿ ಇವಾನಿಯ ಕೆ. ಪ್ರವೀಣ್ ಅವರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪುತ್ತೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಕಿರಿಯ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್‌ನ 4ನೇ ತರಗತಿಯ ವಿದ್ಯಾರ್ಥಿನಿ ಇವಾನಿಯ ಕೆ. ಪ್ರವೀಣ್ ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಅಡ್ಡಹೊಳೆ ನಿವಾಸಿ ಪ್ರವೀಣ್ ಥೋಮಸ್ ಹಾಗೂ ಸೈಂಟ್ ಆಂಟನೀಸ್ ಪ್ರೌಢ ಶಾಲೆಯ ಶಿಕ್ಷಕಿ ಎಲಿಝಬೆತ್ ಪಿ.ಯು. ದಂಪತಿಗಳ ಸುಪುತ್ರಿಯಾಗಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಸಂಚಾಲಕ ಫಾ.ಹನಿ ಜೇಕಬ್, ಸಹ ಸಂಚಾಲಕ ಡೀಕನ್ ಜಾರ್ಜ್, ಮುಖ್ಯಶಿಕ್ಷಕ ಸಿಬಿಚ್ಚನ್ ಟಿ.ಸಿ. ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.

  •  

Leave a Reply

error: Content is protected !!