


ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ವತಿಯಿಂದ ಕಡಬ ತಾಲ್ಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿ ನಿರ್ಮಾಣಕ್ಕೆ ಪೂಜ್ಯ ಡಾ.ಡಿ.ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ ಸಹಾಯಧನದ ಮಂಜೂರಾತಿ ಪತ್ರವನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.
ಈ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಅವರು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಸನ್ನ ಹೆಬ್ಬಾರು ಹಾಗೂ ಮುಖ್ಯಶಿಕ್ಷಕಿ ಸೂಸಮ್ಮ ಮುತ್ತಾಯಿರವರಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಕಡಬ ತಾಲೂಕಿನ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಉಡುಪಿ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಜಯಂತ್ ನಾಯ್ಕ್, ಶಾಲಾ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಸುಧಾಕರ್ ಪಿ., ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಉಪಸ್ಥಿತರಿದ್ದರು. ಜೊತೆಗೆ ಎಸ್.ಡಿ.ಎಂ.ಸಿ ಸದಸ್ಯರಾದ ಚಿದಾನಂದ ಎ.ಎಸ್., ಶ್ರುತಿ, ಸಂತೋಷ್, ಅಂಗನವಾಡಿ ಶಿಕ್ಷಕಿ ಮೇರಿ ಎನ್.ಎ. ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.





