ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರನ್ನು ಸೇವಾಭಾರತಿ ತಂಡ ಜ.06 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು ಆಯೋಜಿಸುವ ಬಗ್ಗೆ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕರಾದ ಕೆ.ವಿನಾಯಕ ರಾವ್, ಸೇವಾಭಾರತಿಯ ಟ್ರಸ್ಟಿ ಶ್ರೀ ಜೈ ರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ ಅವರು ಉಪಸ್ಥಿತರಿದ್ದರು.

  •  

Leave a Reply

error: Content is protected !!