


ನೆಲ್ಯಾಡಿ: ಬೈಕ್ ಸ್ಕಿಡ್ ಆಗಿ ಪಲ್ಟಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತ್ತಡ್ಕ ಸಮೀಪ ಜ23 ರಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಶಿರಾಡಿ ಗ್ರಾಮದ ಮಿತ್ತಮಜಲು ನಿವಾಸಿ ಜಾಯ್ ಇ.ಪಿ. (51) ಎಂದು ಗುರುತಿಸಲಾಗಿದೆ.
ಜಾಯ್ ಇ.ಪಿ. ಅವರು ಬೈಕ್ನಲ್ಲಿ ಸಂಚರಿಸುತ್ತಿದ್ದ ವೇಳೆ ಲಾವತ್ತಡ್ಕ ಸಮೀಪ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಮೇಲೆ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ





