ಬಿಳಿನೆಲೆಯಲ್ಲಿ ಧರ್ಮಸ್ಥಳ ಯೋಜನೆಯಿಂದ ಉಚಿತ ಸಾರಿ ಫೋಲ್ಡಿಂಗ್ ಹಾಗೂ ಸಾರಿ ಗೊಂಡೆ ತರಬೇತಿ ಸಮಾರೋಪ

ಶೇರ್ ಮಾಡಿ
ಬಿಳಿನೆಲೆಯಲ್ಲಿ ಧರ್ಮಸ್ಥಳ ಯೋಜನೆಯಿಂದ ಉಚಿತ ಸಾರಿ ಫೋಲ್ಡಿಂಗ್ ಹಾಗೂ ಸಾರಿ ಗೊಂಡೆ ತರಬೇತಿ ಸಮಾರೋಪ

ಬಿಳಿನೆಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಕಡಬ ತಾಲೂಕು ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಬೆಳ್ತಂಗಡಿ ಇವರ ಆಶ್ರಯದಲ್ಲಿ ನಡೆಸಲಾದ ಉಚಿತ ಸಾರಿ ಫೋಲ್ಡಿಂಗ್ ಮತ್ತು ಸಾರಿ ಗೊಂಡೆ ಕಟ್ಟುವ ಐದು ದಿನಗಳ ಕೌಶಲ್ಯ ಅಭಿವೃದ್ಧಿ ತರಬೇತಿ ಸಮಾರೋಪ ಸಮಾರಂಭ ಬಿಳಿನೆಲೆಯ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಜರುಗಿತು.

ಫೆ.16ರಿಂದ 20ರ ವರೆಗೆ ನಡೆದ ಈ ತರಬೇತಿಯಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಣೆ ಮಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ-2 ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ರವರು ಮಾತನಾಡಿ, ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಕೌಶಲ್ಯವನ್ನು ಬೆಳೆಸಿಕೊಂಡು ಸ್ವಉದ್ಯೋಗ ಮಾಡಿ ಆತ್ಮಗೌರವದಿಂದ ಬದುಕಲು ಈ ತರಬೇತಿ ಪ್ರೇರಣೆಯಾಗಲಿ ಎಂದು ಆಶಿಸಿದರು.

ಕಾರ್ಯಕ್ರಮಕ್ಕೆ ಗೋಪಾಲಕೃಷ್ಣ ದೇವಸ್ಥಾನ ಆಡಳಿತ ಮಂಡಳಿಯ ಕಾರ್ಯದರ್ಶಿ ಮನೋಜ್ ಕುಮಾರ್ ಅಧ್ಯಕ್ಷತೆ ವಹಿಸಿದರು. ಸಭೆಯಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ, ನಿವೃತ್ತ ಶಿಕ್ಷಕಿ ಶಾರದಾ, ಬೆಳ್ತಂಗಡಿ ತರಬೇತಿ ಸಂಸ್ಥೆಯ ಉಪನ್ಯಾಸಕಿ ಧರಣಿ, ಜ್ಞಾನ ದೀಪ ಜ್ಞಾನ ವಿಕಾಸ ಕೇಂದ್ರದ ಸಂಯೋಜಕಿ ಉಷಾ ರವರು ವೇದಿಕೆಯಲ್ಲಿದ್ದು ಸಂದರ್ಭೋಚಿತವಾಗಿ ಮಾತನಾಡಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ತರಬೇತಿಗೆ ಹಾಜರಾದ ಶಿಬಿರಾರ್ಥಿಗಳಾದ ಸುಜಾತ, ಚಂದನ, ಮಮತಾ, ಶಶಿಕಲಾ ರವರು ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಬಿಳಿನೆಲೆ ಸೇವಾ ಪ್ರತಿನಿಧಿ ಸತೀಶ್ ಸ್ವಾಗತಿಸಿ, ವಲಯ ಮೇಲ್ವಿಚಾರಕ ರವಿಪ್ರಸಾದ್ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮವನ್ನು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಚೇತನ ನಿರೂಪಿಸಿದರು.

ಒಟ್ಟು 28 ಮಂದಿ ಶಿಬಿರಾರ್ಥಿಗಳು ಸಾರಿ ಫೋಲ್ಡಿಂಗ್ ಹಾಗೂ ಸಾರಿ ಗೊಂಡೆ ತಯಾರಿಸಿ ಪ್ರಾತ್ಯಕ್ಷಿಕೆ ನೀಡಿದರು. ಜ್ಞಾನ ದೀಪ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Leave a Reply

error: Content is protected !!