ಮಾ.8; ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವ

ಶೇರ್ ಮಾಡಿ

ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ರಂಗಪೂಜೆ ಹಾಗೂ ದೈವಗಳ ನೇಮೋತ್ಸವ ಕಾರ್ಯಕ್ರಮವು ಮಾ.8ರಂದು ರವಿವಾರ ನಡೆಯಲಿದೆ.

ಕಾರ್ಯಕ್ರಮವು ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಆರಂಭಗೊಳ್ಳಲಿದ್ದು, ಬಳಿಕ ಮಹಾಗಣಪತಿ ಹೋಮ, ಕಲಶ ಪೂಜೆ ನಡೆಯಲಿದೆ. ನಂತರ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ಮಹಿಳಾ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ನೆಲ್ಯಾಡಿ ಶ್ರೀ ಹಿರಣ್ಮಯಿ ಮಹಿಳಾ ಯಕ್ಷಗಾನ ಕಲಾಸಂಘ ಇವರಿಂದ “ಶಲ್ಯ ನಿರ್ಗಮನ” ತಾಳಮದ್ದಲೆ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ ದೇವರಿಗೆ ಕಲಶ ಅಭಿಷೇಕ, ನಾಗ ದೇವರಿಗೆ ಹಾಗೂ ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5 ಗಂಟೆಯಿಂದ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಶ್ರೀ ದೇವರಿಗೆ ರಂಗಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ನಂತರ ದೈವಗಳ ನೇಮೋತ್ಸವ ಕಾರ್ಯಕ್ರಮ ಜರುಗಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸುಬ್ರಹ್ಮಣ್ಯ ಶಬರಾಯ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್ ಕೆ. ಎಸ್. ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!