ಬೈಕ್ ಅಪಘಾತ: ಪದ್ಮುಂಜ ಸಹಕಾರಿ ಸಂಘದ ಸಿಬ್ಬಂದಿ ಚಿದಾನಂದ ಗೌಡ ಸಾವು

ಶೇರ್ ಮಾಡಿ
ಬೈಕ್ ಅಪಘಾತ: ಪದ್ಮುಂಜ ಸಹಕಾರಿ ಸಂಘದ ಸಿಬ್ಬಂದಿ ಚಿದಾನಂದ ಗೌಡ ಸಾವು

ಬಂದಾರು: ಉಪ್ಪಿನಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ಚಿದಾನಂದ ಗೌಡ (56) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಬಂದಾರು ಗ್ರಾಮದ ಕುರಾಯ ನಿವಾಸಿಯಾಗಿದ್ದ ಚಿದಾನಂದ ಗೌಡ ಅವರು ಮಾ.8ರಂದು ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಉಪ್ಪಿನಂಗಡಿಯಲ್ಲಿ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿದಾನಂದ ಗೌಡ ಅವರು ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಹಲವು ವರ್ಷಗಳಿಂದ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು, ಜನಸ್ನೇಹಿ, ಪರೋಪಕಾರಿ ಹಾಗೂ ಸರಳ ಸಜ್ಜನಿಕೆಯ ವ್ಯಕ್ತಿಯಾಗಿ ಸ್ಥಳೀಯರಲ್ಲಿ ಗುರುತಿಸಿಕೊಂಡಿದ್ದರು. ಅವರ ಅಕಾಲಿಕ ನಿಧನದಿಂದ ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ.

ಮೃತರು ತಾಯಿ, ಪತ್ನಿ, ಎರಡು ಪುತ್ರಿಯರು, ಒಬ್ಬ ಪುತ್ರ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ರಾತ್ರಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಪಾರ ಸಂಖ್ಯೆಯ ಬಂಧುಗಳು, ಸ್ನೇಹಿತರು ಹಾಗೂ ಸಾರ್ವಜನಿಕರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪದ್ಮುಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಂಕಿತಾ ಕೆ., ನಿರ್ದೇಶಕರು, ಸಿಬ್ಬಂದಿ ವರ್ಗ, ಶ್ರೀ ಕ್ಷೇತ್ರ ಮಲೆಂಗಲ್ಲು ದೇವಸ್ಥಾನದ ಆಡಳಿತ ಮೊಕ್ತೇಸರ ಚಿದಾನಂದ ರಾವ್ ಕೊಲ್ಲಾಜೆ, ಕಣಿಯೂರು ಗುತ್ತು ಸುದರ್ಶನ್ ಹೆಗ್ಡೆ, ರಾಜಶ್ರೀ ಎಸ್. ಹೆಗ್ಡೆ, ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷ ಸೀತಾರಾಮ ಮಡಿವಾಳ, ತಾಲೂಕು ಮಜ್ದೂರು ಸಂಘದ ಅಧ್ಯಕ್ಷ ವಕೀಲ ಉದಯ್ ಕುಮಾರ್ ಬಿ.ಕೆ., ಯುವ ವಕೀಲ ಯತೀಶ್ ಶೆಟ್ಟಿ ಪಣೆಕ್ಕರ, ರಘುಪತಿ ಭಟ್ ಅನಾಬೆ, ವಿಠಲ್ ಭಟ್, ಅಶೋಕ್ ಮೊಗ್ರ ಕಾನಿಸ್ಕ, ಉಮೇಶ್ ಗೌಡ ಅಂಗಡಿಮಜಲು, ಚಂದ್ರಹಾಸ ಗೌಡ ದೇವಸಗುತ್ತು ಮುಗೇರಡ್ಕ, ಬಾಲಕೃಷ್ಣ ಗೌಡ ಮುಗೇರಡ್ಕ ಸೇರಿದಂತೆ ಬಂದಾರು, ಮೊಗ್ರು ಹಾಗೂ ಕಣಿಯೂರು ಗ್ರಾಮದ ಪ್ರಮುಖರು, ನಾಗರಿಕರು ಮತ್ತು ಬಂಧು-ಮಿತ್ರರು ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.

Leave a Reply

error: Content is protected !!