ನೆಲ್ಯಾಡಿ:ಸಾರ್ವಜನಿಕ ಹಿಂದೂ ರುದ್ರಭೂಮಿಗೆ ಶಂಕುಸ್ಥಾಪನೆ: ಶ್ರಮದಾನ ಕಾರ್ಯಕ್ಕೆ

ಶೇರ್ ಮಾಡಿ

ನೆಲ್ಯಾಡಿ: ಕಡಬ ತಾಲೂಕು ಕಡ್ಯ ಕೊಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದನೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯ ಶಂಕುಸ್ಥಾಪನೆ ಹಾಗೂ ಶ್ರಮದಾನ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮಣ ಗೌಡ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಸ್ಥಳದಲ್ಲಿ ಶ್ರಮದಾನ ಕಾರ್ಯವೂ ನಡೆಯಿತು. ಊರಿನ ಸಮಸ್ತ ನಾಗರಿಕರು ಈ ಕಾರ್ಯದಲ್ಲಿ ಭಾಗವಹಿಸಿ ರುದ್ರಭೂಮಿ ನಿರ್ಮಾಣದ ಮಹತ್ವವನ್ನು ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ವಲಯಾಧ್ಯಕ್ಷ ಕುಶಾಲಪ್ಪ ಗೌಡ ಕಳಪ್ಪಾರು, ಪುತ್ತಿಗೆ ಒಕ್ಕೂಟದ ಅಧ್ಯಕ್ಷ ಲೋಕಯ್ಯ ಗೌಡ, ಕಾರ್ಯದರ್ಶಿ ಮೋಹನ್, ಶಿರಾಡಿ ಒಕ್ಕೂಟದ ಅಧ್ಯಕ್ಷ ಸುಕುಮಾರನ್ ಪುತ್ತಿಗೆ ಸೇರಿದಂತೆ ಕಾರ್ಯಕ್ಷೇತ್ರದ ಹಾಗೂ ಶಿರಾಡಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರುದ್ರಭೂಮಿ ನಿರ್ಮಾಣ ಕಾರ್ಯವು ಶೀಘ್ರದಲ್ಲೇ ಪೂರ್ಣಗೊಳ್ಳಲೆಂದು ಎಲ್ಲರೂ ಆಶಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಊರಿನ ಅನೇಕ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ಶ್ರಮದಾನದ ಮೂಲಕ ಸಹಕರಿಸಿದರು.

Leave a Reply

error: Content is protected !!