ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

ಶೇರ್ ಮಾಡಿ
ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

ಕೊಕ್ಕಡ: ಕಾರ್ಕಳ ಶ್ರೀ ಜೈನಮಠದ ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಪ್ರೇರಣೆ ಮತ್ತು ಮಾರ್ಗದರ್ಶನದೊಂದಿಗೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವವು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ನಡೆಯಿತು.

ಊರ-ಪರಊರ ಸಹೃದಯಿ ಧರ್ಮಾಭಿಮಾನಿ ಸ್ವಧರ್ಮ ಬಂಧುಗಳು ಹಾಗೂ ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಹೋತ್ಸವದ ಅಂಗವಾಗಿ ವಿಮಾನಶುದ್ಧಿ, 24 ಕಲಶ ಅಭಿಷೇಕ, ಪಂಚಾಮೃತ ಅಭಿಷೇಕ, ಶ್ರೀ ಸಮ್ಮೇದಗಿರಿ ಸಿದ್ಧ ಕ್ಷೇತ್ರ ಆರಾಧನೆ ಹಾಗೂ ಮಹಾಮಾತೆ ಪದ್ಮಾವತಿ ದೇವಿಗೆ ಶೋಡಶೋಪಚಾರ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿದವು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಹಾಗೂ ಸಂಘದ ಸದಸ್ಯರ ಮಕ್ಕಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.

Leave a Reply

error: Content is protected !!