ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯದಿಂದ 15 ದಿನಗಳ ಸಮುದಾಯ ಸೇವೆಗೆ ಗುರಿಯಾಗಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ (29) ಎಂಬಾತನು, ನ್ಯಾಯಾಲಯದ ಆದೇಶದಂತೆ ಮಾ.15ರಂದು ಸಮುದಾಯ ಸೇವೆಯ ಭಾಗವಾಗಿ ಸಾರ್ವಜನಿಕರಿಗೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಹಾಗೂ ನಿಯಂತ್ರಣ ಕಾರ್ಯವನ್ನು ನಿರ್ವಹಿಸಿದ್ದಾನೆ.
ಇದಾದ ಬಳಿಕ, ಮಾ.15ರಂದು ತಾನು ನಡೆಸಿದ ಸಮುದಾಯ ಸೇವೆಯ ಕುರಿತ ಚಿತ್ರಗಳು ಮತ್ತು ಮಾಹಿತಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದನ್ನು ಮನೆಯಲ್ಲಿದ್ದಾಗ ಗಮನಿಸಿದ ರಕ್ಷಿತ್ ಜಿ ಇದರಿಂದ ಬೇಸರಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ತಕ್ಷಣ ಆತನನ್ನು ಚಿಕಿತ್ಸೆಗಾಗಿ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.