ಕೋಮು ಪ್ರಚೋದನೆ ಪೋಸ್ಟ್‌ಗಳು: ಬೆಳ್ತಂಗಡಿ ಯುವತಿ ಬಂಧನ

ಶೇರ್ ಮಾಡಿ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಲ್ಲಿ ಯುವತಿಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರು ನಗರದ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

2025ನೇ ಸಾಲಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಮನಸ್ಸು ಉಂಟುಮಾಡುವ ಉದ್ದೇಶದಿಂದ ಪ್ರಚೋದನಾತ್ಮಕ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 353(1), 353(2), 61(2), 55 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ವೇಳೆ “Terrorism has religion and so called Terrorists too. Its Islam” ಸೇರಿದಂತೆ ಹಲವು ವಿವಾದಾತ್ಮಕ ಪೋಸ್ಟ್‌ಗಳನ್ನು ಬೆಳ್ತಂಗಡಿ ತಾಲೂಕಿನ ಯುವತಿಯೊಬ್ಬಳು ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಮಾ.19ರಂದು ಆರೋಪಿತೆಯನ್ನು ಬಂಧಿಸಿ, ಆಕೆ ಬಳಸಿದ್ದ ಮೊಬೈಲ್ ಫೋನ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಪೋಸ್ಟ್‌ಗಳ ಮಾಹಿತಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿತೆಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

error: Content is protected !!