




ಧರ್ಮಸ್ಥಳ: ಕುಕ್ಕನೂರಿನಿಂದ – ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮಾಡಲಾಗುತ್ತಿದೆ. ಬಸ್‍ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





