




ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಡಬ ತಾಲೂಕು ಗೋಳಿತೊಟ್ಟು ವಲಯದ ಕೊಣಾಲು ಗ್ರಾಮದ ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಭಾಂಗಣ ನಿರ್ಮಾಣಕ್ಕಾಗಿ ಮಂಜೂರಾದ ಅನುದಾನವನ್ನು ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯೋಜನೆಯ ವಿವಿಧ ಕಾರ್ಯಕ್ರಮಗಳು, ಅನುದಾನಗಳ ಬಳಕೆ ಹಾಗೂ ಧಾರ್ಮಿಕ ಕೇಂದ್ರಗಳ ಸ್ವಚ್ಛತೆ ಮತ್ತು ಅಭಿವೃದ್ಧಿಯ ಮಹತ್ವ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ವಲಯ ಮೇಲ್ವಿಚಾರಕಿ ಜಯಶ್ರೀ, ವಲಯ ಅಧ್ಯಕ್ಷ ಬಾಲಕೃಷ್ಣ ಗೌಡ ಅಲೆಕ್ಕಿ ಉಪಸ್ಥಿತರಿದ್ದರು.
ದೇವಸ್ಥಾನದ ಆಡಳಿತ ಮೊಕ್ತೆಸರ ಮಾದವ ಸರಳಾಯ, ಸುಂದರ ಶೆಟ್ಟಿ ಪುರ, ಬಾಬು ಕಿನ್ಯಡಕ್ಕ, ಲಿತಿನ್ ಕುಮಾರ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇದೇ ವೇಳೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಗೆ ಯೋಜನೆಯ ವತಿಯಿಂದ ಬ್ಯಾಗ್‌ಗಳನ್ನು ವಿತರಿಸಲಾಯಿತು. ಶೌರ್ಯ ತಂಡದ ಸಂಯೋಜಕ ಜನಾರ್ಧನ್, ಸೇವಾ ಪ್ರತಿನಿಧಿಗಳಾದ ಜಯಶ್ರೀ, ಸುಮಲತಾ, ಪ್ರತಿಮಾ ಹಾಗೂ ತಂಡದ ಸದಸ್ಯರಾದ ಮನೋಹರ ಜೈನ್, ಪಾಶ್ವನಾಥ ಜೈನ್, ಶರತ್, ದಿವಾಕರ ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕಿ ಜಯಶ್ರೀ ಸ್ವಾಗತಿಸಿದರು.





