




ಬೆಳ್ತಂಗಡಿ: ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು ಬಳಿಕ ಇದೀಗ ಶಿಕ್ಷಕಿ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯಶಿಕ್ಷಕಿ ಮೇಲೆ 2018 ರಿಂದ 2023 ರ ನಡುವೆ ಮನೆಗೆ ಬಂದು ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಬಲವಂತವಾಗಿ ಅತ್ಯಾಚಾರ ಮಾಡಿರುವ ಬಗ್ಗೆ ಮಾ.21 ರಂದು ಸಂಜೆ ವೇಣೂರು ಪೊಲೀಸ್ ಠಾಣೆಯಲ್ಲಿ ನೊಂದ ಮಹಿಳೆ ದೂರು ನೀಡಿದ್ದಾರೆ.
ಅದರಂತೆ ಪೊಲೀಸರು ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ





