ಉಪ್ಪಿನಂಗಡಿ: ನಾಗಮಂಡಲ ಕಾರ್ಯಕ್ರಮಕ್ಕೆ ಚಪ್ಪರಮಹೂರ್ತ

ಶೇರ್ ಮಾಡಿ

ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ ನೆರವೇರಿತು. ಚಪ್ಪರಮಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ಸಹಸ್ರಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರೀಶ್ ಭಟ್ಟ ಅವರು ನೆರವೇರಿಸಿದರು.

ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ನಾೖಕ್ ಅವರು ತೆಂಗಿನ ಕಾಯಿ ಒಡೆದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಪ್ರತಾಪ್ ಪೆರಿಯಡ್ಕ, ಅಧ್ಯಕ್ಷ ಚಂದಪ್ಪ ಮೂಲ್ಯ, ಸಂಚಾಲಕರು ಅರುಣ್ ಪುತ್ತಿಲ, ಕಾರ್ಯಾಧ್ಯಕ್ಷ ಹರಿಪ್ರಸಾದ್ ರೈ, ಪ್ರಧಾನ ಕಾರ್ಯದರ್ಶಿ ನವೀನ್ ಕಲ್ಯಾಟ್ಟೆ, ಪ್ರಶಾಂತ್ ನೆಕ್ಕಿಲಾಡಿ, ಕೋಶಾಧಿಕಾರಿ ಯತೀಶ್ ಶೆಟ್ಟಿ ಮತ್ತು ಸಮಿತಿಯ ಪದಾಧಿಕಾರಿಗಳಾಗಿರುವ ಜಯಂತ ಪುರೊಳಿ, ಜಯರಾಮ ಆಚಾರ್ಯ, ರಾಜಗೋಪಾಲ್ ಭಟ್, ರಾಮಚಂದ್ರ ಮಣಿಯಾಣಿ, ಮಹೇಂದ್ರ ವರ್ಮ, ವಿಜಿತ್, ಮನೀಶ್ ಕುಲಾಲ್, ಜನಾರ್ಧನ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!