ಕೋಮು ದ್ವೇಷದ ಕಮೆಂಟ್ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ-ಆರೋಪಿ ಬಂಧನ

ಶೇರ್ ಮಾಡಿ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಉಂಟುಮಾಡುವ ರೀತಿಯಲ್ಲಿ ಪ್ರಚೋದನಕಾರಿ ಕಮೆಂಟ್ ಹಾಕಿದ ಆರೋಪದಲ್ಲಿ ಒಬ್ಬನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

2026ರ ಜನವರಿ ತಿಂಗಳಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕಿರಾತ್ (ಕುರಾನ್ ಪಠಣ) ಸ್ಪರ್ಧೆಯ ವಿಡಿಯೋ ಉದಯವಾಣಿ ಫೇಸ್‌ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದ ವೇಳೆ, ಗಣೇಶ್ ಪ್ರಸಾದ್ ಎಂಬಾತನು ತನ್ನ ಫೇಸ್‌ಬುಕ್ ಖಾತೆಯಿಂದ “ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂದು ಕೋಮು ಪ್ರಚೋದನಕಾರಿ ಕಮೆಂಟ್ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.

ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 15/2026 ರಂತೆ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಕಲಂ 66ರಡಿ ತನಿಖೆ ಕೈಗೊಳ್ಳಲಾಗಿತ್ತು.

ತನಿಖೆ ವೇಳೆ ಆ ಕಮೆಂಟ್ ಮಾಡಿದ ವ್ಯಕ್ತಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಗಣೇಶ್ ಪ್ರಸಾದ್ (41) ಎಂದು ಪತ್ತೆಯಾಗಿದೆ. ಆರೋಪಿಯನ್ನು ಮಾ.27ರಂದು ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

error: Content is protected !!