





ಉಪ್ಪಿನಂಗಡಿ: ಉಪ್ಪಿನಂಗಡಿ ಅರಣ್ಯ ವಲಯದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಅರಣ್ಯ ವೀಕ್ಷಕ ರವಿ ಬಿ. ಅವರು ಮಾ.31ರಂದು ವಯೋನಿವೃತ್ತಿ ಹೊಂದಿದ ಹಿನ್ನೆಲೆ, ವಲಯ ಅರಣ್ಯ ಕಚೇರಿಯಲ್ಲಿ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಯಿತು.
ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಹೆಚ್.ಪಿ. ಅವರು ನಿವೃತ್ತ ರವಿ ಬಿ. ಅವರನ್ನು ಸನ್ಮಾನಿಸಿ, ಅವರ ಸೇವೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ವಲಯದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿ, ನಿವೃತ್ತರಿಗೆ ಶುಭ ಹಾರೈಸಿದರು.
ರವಿ ಬಿ. ಅವರು ಉಪ್ಪಿನಂಗಡಿ ವಲಯದಲ್ಲಿಯೇ ಒಟ್ಟು 36 ವರ್ಷ 09 ತಿಂಗಳುಗಳ ಕಾಲ ಕರ್ತವ್ಯ ನಿರ್ವಹಿಸಿದ್ದು, ಅದರಲ್ಲಿ ಸುಮಾರು 34 ವರ್ಷಗಳನ್ನು ವಾಹನ ಚಾಲಕರಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಸುಮಾರು ಎರಡು ವರ್ಷಾರ್ಧದಿಂದ ಕಣಿಯೂರು ಶಾಖಾ ವ್ಯಾಪ್ತಿಯಲ್ಲಿ ಅರಣ್ಯ ವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.




