





ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್ ಅಂಚನ್ ಧರ್ಮಸ್ಥಳ ಹಾಗೂ ಸಂತೋಷ್ ಕುಮಾರ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ.
ಇವರು ಇಬ್ಬರೂ ಹಲವಾರು ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ವಿವಿಧ ಸಮಾಜಮುಖಿ ಸಂಘ-ಸಂಸ್ಥೆಗಳ ಮೂಲಕ ಜನಸೇವೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ.




