





ಕೊಕ್ಕಡ: ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಸೋಮವಾರದಂದು ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ.
ಧರ್ಮಸ್ಥಳದಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಬೆಂಗಳೂರಿನಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದು, ಈ ಪೈಕಿ ಕವಿತಾ ಎಂಬ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಕವಿತಾ ಅವರನ್ನು ತಕ್ಷಣವೇ ಕೊಕ್ಕಡದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




