





ಕೊಕ್ಕಡ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ ಅವರು ಸೋಮವಾರ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ, ತಾಯಿ ರತ್ನಾವತಿ ಹಾಗೂ ಕುಟುಂಬದ ಇತರ ಸದಸ್ಯರು ಸಹ ಉಪಸ್ಥಿತರಿದ್ದು, ಶ್ರೀ ಮಹಾಗಣಪತಿಯ ದರ್ಶನ ಪಡೆದು ಆಶೀರ್ವಾದ ಪಡೆದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಅವರು ರಿಷಬ್ ಶೆಟ್ಟಿ ಅವರಿಗೆ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಗೌರವಿಸಿದರು.




