ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಶೇರ್ ಮಾಡಿ

 

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಫೆಬ್ರವರಿ – ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಪರೀಕ್ಷಾ ಮಂಡಳಿ ಅಂತಿಮ ದಿನಾಂಕ ಪ್ರಕಟಿಸಿದೆ.

ಏಪ್ರಿಲ್‌ 9 ರಂದು (ಗುರುವಾರ) ಬೆಳಗ್ಗೆ ಫಲಿತಾಂಶ ಪ್ರಕಟವಾಗಲಿದೆ. ಇಂದು ಫಲಿತಾಂಶ ಪ್ರಕಟವಾಗಬೇಕಿತ್ತು‌‌‌ ಕಾರಣವೇ ಇಲ್ಲದೇ ಬೋರ್ಡ್ ಫಲಿತಾಂಶ ಪ್ರಕಟ ಮುಂದೂಡಿಕೆ ಮಾಡಿತ್ತು. ಈ ಬೆನ್ನಲ್ಲೇ ಫಲಿತಾಂಶ ಪ್ರಕಟಿಸಲು ಅಂತಿಮ ದಿನಾಂಕವನ್ನೂ ಬಿಡುಗಡೆ ಮಾಡಿದೆ.

ಏಪ್ರಿಲ್ 9ರ ಬೆಳಗ್ಗೆ ಸಚಿವರು ನಡೆಸುವ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನದ ನಂತ್ರ ಇಲಾಖೆ ವೆಬ್‌ಸೈಟ್‌ ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಅಂತ ಎಕ್ಸಾಂ ಬೋರ್ಡ್ ಮೂಲಗಳು ಮಾಹಿತಿ ನೀಡಿದೆ.

ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೂ PUC ಪರೀಕ್ಷೆ ನಡೆದಿತ್ತು. ಒಟ್ಟು ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

 

Leave a Reply

error: Content is protected !!