





ನೆಲ್ಯಾಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಕ್ಕೆ ಶೇ.100 ತೇರ್ಗಡೆ ಫಲಿತಾಂಶ ಬಂದಿದೆ.
ವಿಜ್ಞಾನ ವಿಭಾಗ:
ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ 46 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಲಭಿಸಿದೆ. 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 35 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶ್ರೀ ಲಕ್ಷ್ಮಿ. ಜಿ(583), ಆಲ್ವಿಯ ಆಲ್ಫೋನ್ಸ ವಿನೇಜಸ್(566), ಸೋನಾ ಫ್ರಾನ್ಸಿಸ್ (532), ಭವಿಕಾ ಬೇಬಿಲಾಲ್ (531), ಫಾತಿಮಾ ವಫಾ (522), ಶರೀನಾ ಪಿ.ಆರ್ (517), ಮಿಶೇಲ್ ವಿ.ಎಸ್ (515), ಪಲ್ಲವಿ ಕೆ.ಪಿ (514), ಜೆನಿತ್ ಜಾರ್ಜ್(511) ಅಂಕ ಪಡೆದುಕೊಂಡು ಡಿಸ್ಟಿಂಕ್ಷ್‌ನಲ್ಲಿ ತೇರ್ಗಡೆಯಾಗಿದ್ದಾರೆ.
ವಾಣಿಜ್ಯ ವಿಭಾಗ:
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 31 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಲಭಿಸಿದೆ. 12 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ತುಲನಾ (576), ಹಿತಶ್ರೀ. ಎಸ್.ಎಂ (573), ಸಾತ್ವಿಕ ಎಸ್.ಎಂ (570), ನಿಖಿಲ್ ಜಾನ್ (557), ಸಾತ್ವಿಕ್ ಎಂ.ಟಿ (548), ಫಾತಿಮಾ ನಫಿಯಾ(545), ಎಂ.ಎ ಮಹಮ್ಮದ್ ಸಬಿರ್ (543), ಜೋಮೋನ್ (541), ಫಾತಿಮಾತ್ ರೀಝ(525), ಫಾತಿಮಾ ಇಫಾ (523), ಫಾತಿಮತ್ ಫಾಝೀಮಾ(519), ತುಷಾರ್ ಎಂ ಕುಂದರ್ (519) ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಸಂಸ್ಥೆಯ ಸಂಚಾಲಕ ಹಾಗೂ ಪ್ರಿನ್ಸಿಪಾಲ್ ರೆ.ಫಾ.ಡಾ.ವರ್ಗೀಸ್ ಕೈಪನಡ್ಕ, ಕೋಶಾಧಿಕಾರಿ ಫಾ.ಸ್ಯಾಮುವೆಲ್, ವೈಸ್ ಪ್ರಿನ್ಸಿಪಾಲ್ ಜೋಸ್ ಎಂ.ಜೆ., ಪ್ರೌಢಶಾಲಾ ಮುಖ್ಯಶಿಕ್ಷಕ ಜಾರ್ಜ್ ಕೆ.ಥಾಮಸ್ ಮತ್ತು ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಜೋಸ್ ಪ್ರಕಾಶ್ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.




