





ಗೋಳಿತ್ತಟ್ಟು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಗೋಳಿತ್ತಟ್ಟು ಇಲ್ಲಿ ಶಾಲಾ ಶತಮಾನೋತ್ಸವ ಸಂಭ್ರಮದ ಅಂಗವಾಗಿ ‘ಶತಸಿರಿ ಶತಮಾನ ಸಂಭ್ರಮೋತ್ಸವ 2026’ ಪ್ರಯುಕ್ತ ಶಾಲಾ ಪೂರ್ವ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ವಿಶೇಷ ಕ್ರೀಡಾಕೂಟ ‘ನೆನಪಿನಂಗಳ’ ಏರ್ಪಡಿಸಲಾಗಿದೆ.
ಬಾಲ್ಯದ ಸಾಂಪ್ರದಾಯಿಕ ಆಟಗಳಿಗೆ ಮರುಜೀವ ತುಂಬುವ ಉದ್ದೇಶದಿಂದ ಆಯೋಜಿಸಲಾದ ಈ ಕ್ರೀಡಾಕೂಟವು ಏ.13ರಂದು ವಿವಿಧ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳೊಂದಿಗೆ ಆರಂಭಗೊಳ್ಳಲಿದ್ದು, ಏ.14ರಂದು ಕ್ರಿಕೆಟ್ ಪಂದ್ಯಾಟ ನಡೆಯಲಿದೆ.
ಈ ಕ್ರೀಡೋತ್ಸವದಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಅವಕಾಶ ಕಲ್ಪಿಸಲಾಗಿದೆ.
ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿರುವ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಪೂರ್ವ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು, ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಎಲ್ಲರೂ ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಕಲ ಸಿದ್ಧತೆಗಳನ್ನು ಕೈಗೊಂಡಿರುವುದಾಗಿ ತಿಳಿಸಿದ್ದಾರೆ.




