ಕಡಬ ಕೋಡಿಂಬಾಳ ಬಳಿ ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು

ಶೇರ್ ಮಾಡಿ

 

ಕಡಬ ಕೋಡಿಂಬಾಳ ಬಳಿ ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು

ಕಡಬ: ತಾಲೂಕಿನ ಕೋಡಿಂಬಾಳ ಪ್ರದೇಶದ 102 ನೆಕ್ಕಿಲಾಡಿ, ಕೋರಿಯರ್ ಸಮೀಪದಲ್ಲಿರುವ ಕುಮಾರಧಾರ ನದಿ ತೀರದಲ್ಲಿ ಕಾಡಾನೆಗಳ ಹಿಂಡು ಶನಿವಾರ ಬೆಳಗ್ಗೆ ಕಾಣಿಸಿಕೊಂಡಿದೆ. ಒಟ್ಟು ಎಂಟು ಆನೆಗಳು ಗುಂಪಾಗಿ ಸಂಚರಿಸುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಸ್ಥಳೀಯ ನಿವಾಸಿಗಳು ಹಾಗು ವಾಹನ ಸವಾರರಲ್ಲಿ ಅಂತಕ ಉಂಟಾಗುತ್ತಿದ್ದಂತೆಯೇ ವಿಷಯ ತಿಳಿದ ಸುಬ್ರಹ್ಮಣ್ಯ ಹಾಗೂ ಪಂಜವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬಂದೋಬಸ್ತು ಕೈಗೊಂಡಿದ್ದಾರೆ. ಕಾಡಾನೆಗಳ ಚಲನವಲನವನ್ನು ಗಮನಿಸುತ್ತಾ ಅವುಗಳನ್ನು ಅರಣ್ಯದತ್ತ ಸುರಕ್ಷಿತವಾಗಿ ಹಿಮ್ಮೆಟ್ಟಿಸುವ ಕಾರ್ಯಾಚರಣೆ ಮುಂದುವರಿದಿದೆ.

ಅರಣ್ಯ ಅಧಿಕಾರಿಗಳ ಪ್ರಕಾರ ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡಾನೆಗಳು ಜನವಸತಿ ಪ್ರದೇಶಗಳಿಗೆ ಬರುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಗ್ರಾಮೀಣ ಭಾಗದ ಜನರು ಹೆಚ್ಚು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಸೂಚನೆ ನೀಡಿರುವ ಅರಣ್ಯ ಇಲಾಖೆ ಕಾಡಾನೆಗಳ ಹತ್ತಿರ ಹೋಗಬಾರದು ಫೋಟೋ ಮತ್ತು ವಿಡಿಯೋ ತೆಗೆದುಕೊಳ್ಳಲು ಯತ್ನಿಸಬಾರದು ಹಾಗೂ ಅರಣ್ಯ ಸಮಯದಲ್ಲಿ ಹೊರಗೆ ಅನಾವಶ್ಯಕ ಸಂಚಾರವನ್ನು ತಪ್ಪಿಸಿಕೊಳ್ಳಬೇಕು ಎಂದು ಮನವಿ ಮಾಡಿದೆ.

ಯಾವುದೇ ಅನಾಹುತ ಸಂಭವಿಸಿದರೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಸ್ಥಳದಲ್ಲಿ ಇನ್ನೂ ಅರಣ್ಯ ಸಿಬ್ಬಂದಿ ನೀಯೋಜನೆಗೊಂಡಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದ ಅಧಿಕಾರಿಗಳು.

 

Leave a Reply

error: Content is protected !!