ಬೆಳ್ತಂಗಡಿ: ಹಿಂದು ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ

ಶೇರ್ ಮಾಡಿ

 

ಬೆಳ್ತಂಗಡಿ: ದ್ವೇಷ ಭಾಷಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆಗೆ ಹಾಜರಾಗದ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಬೆಳ್ತಂಗಡಿಗೆ ಕಾರ್ಯ ತರುತ್ತಿದ್ದಾರೆ.

ಸಮುಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಭಾಷೆಗೈದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಕಾರಣಕ್ಕಾಗಿ ಬಂಧಿಸಿದ್ದಾರೆ.

ಬೆಳ್ತಂಗಡಿಯ ಕಸಬು ಗ್ರಾಮದ ಹುಣ್ಣೆಕಟ್ಟೆ ನಿವಾಸಿ ಜೋರಮ್ ಬರ್ಬೋಝ ಎಂಬವರು 2025ರ ಅಗಸ್ಟ್ 7ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.

ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸಿಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರೆಂಟ್ ಪಡೆದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಸಂಜೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

 

Leave a Reply

error: Content is protected !!