





ಕೊಕ್ಕಡ: ಉತ್ತಮ ಮಳೆಯಾಗಲಿ ಎಂಬ ಆಶಯದೊಂದಿಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ರುದ್ರ ಪಠಣದೊಂದಿಗೆ ಭಕ್ತರಿಂದ ಸೀಯಾಳಾಭಿಷೇಕ ಕಾರ್ಯಕ್ರಮವು ಏ.20ರಂದು ಭಕ್ತಿಭಾವದಿಂದ ನೆರವೇರಿತು.
ದೇವಸ್ಥಾನದ ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಹಾಗೂ ಸಹ ಅರ್ಚಕರು ವಿಧಿವಿಧಾನಗಳೊಂದಿಗೆ ಅಭಿಷೇಕ ನೆರವೇರಿಸಿದರು. ರುದ್ರ ಪಠಣವನ್ನು ಮುರಳಿಕೃಷ್ಣ ಭಟ್ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ್ ರಾವ್, ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ, ಸದಸ್ಯರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು.




