





ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.
ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶೇ.94.10 ಫಲಿತಾಂಶ ಬಂದಿದ್ದು, 98.40% ಉತ್ತೀರ್ಣ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಕಳೆದ ಬಾರಿ 94.41% ಫಲಿತಾಂಶ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿತ್ತು.
7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ
ಇನ್ನೂ ಬಾರಿ ಉತ್ತೀರ್ಣ ಅಂಕ 33ಕ್ಕೆ ಇಳಿಸಲಾಗಿತ್ತಾದ್ರೂ, 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. 21 ವಿದ್ಯಾರ್ಥಿಗಳು 624 ಅಂಕ, 28 ವಿದ್ಯಾರ್ಥಿಗಳು 623 ಅಂಕ, 74 ವಿದ್ಯಾರ್ಥಿಗಳು 622 ಅಂಕ, 98 ವಿದ್ಯಾರ್ಥಿಗಳು 621 ಅಂಕ ಹಾಗೂ 150 ವಿದ್ಯಾರ್ಥಿಗಳು 620 ಅಂಕಗಳನ್ನ ಪಡೆದುಕೊಂದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.




