ಕಾಂಚನ ವೆಂಕಟಸುಬ್ರಮಣ್ಯಂ ಸ್ಮಾರಕ ಪ್ರೌಢಶಾಲೆಗೆ ಶೇ100 ಫಲಿತಾಂಶ

ಶೇರ್ ಮಾಡಿ

 

ಕಾಂಚನ ವೆಂಕಟಸುಬ್ರಮಣ್ಯಂ ಸ್ಮಾರಕ ಪ್ರೌಢಶಾಲೆಗೆ ಶೇ100 ಫಲಿತಾಂಶ

ನೆಲ್ಯಾಡಿ: ಶೈಕ್ಷಣಿಕ ವರ್ಷ 2025–26ರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನಲ್ ಸೊಸೈಟಿ ಆಡಳಿತಕ್ಕೆ ಒಳಪಟ್ಟ ಕಾಂಚನ ವೆಂಕಟಸುಬ್ರಮಣ್ಯಂ ಸ್ಮಾರಕ ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ ದಾಖಲಾಗಿದೆ.

ಪರೀಕ್ಷೆಗೆ ಹಾಜರಾದ ಒಟ್ಟು 25 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ 7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 3 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು : ಮಾನಸ(600), ಝಹೀಮಾ(572), ಅಶ್ವಿನಿ(561), ಕೀರ್ತನಾ ಹೆಚ್(545), ಯಜ್ಞಶ್ರೀ ರೈ(537), ಲಿಖಿತಾ ಎ(537), ರಶ್ಮಿತ್(537), ಯೋಗೀಂದ್ರ(522), ಹರ್ಷಿತ(517), ರೂಪೇಶ್ (503) ಅಂಕಗಳನ್ನು ಪಡೆದು ಉನ್ನತ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಾಲೆಯ ಮುಖ್ಯಶಿಕ್ಷಕ ರಮೇಶ್ ಮಯ್ಯ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ಶಿಕ್ಷಕ-ರಕ್ಷಕ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

 

Leave a Reply

error: Content is protected !!