





ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದಲ್ಲಿರುವ ಪಟ್ಟೂರು ಶ್ರೀ ಕ್ಷೇತ್ರ ದೈವಂಗಳ ಬನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಧ್ವಜಸ್ತಂಭದ ಆಗಮನ ಸಮಾರಂಭವು ಗುರುವಾರ ನಡೆಯಲಿದೆ.
ಬೆಳಿಗ್ಗೆ 8 ಗಂಟೆಗೆ ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ಕ್ಷೇತ್ರದಲ್ಲಿ ನೂತನ ಧ್ವಜಮರಕ್ಕೆ ಪೂಜಾ ಕಾರ್ಯಕ್ರಮದಿಂದ ಆರಂಭವಾಗಲಿದೆ. ಬಳಿಕ ಬೆಳಿಗ್ಗೆ 8.15ಕ್ಕೆ ಬಾಬು ಗೌಡ ಮೊಟ್ಟಿಕಲ್ಲು ಅವರು ಧ್ವಜಮರಕ್ಕೆ ಚಾಲನೆ ನೀಡಲಿದ್ದಾರೆ.
ವಿವಿಧ ಭಜನಾ ಮಂಡಳಿಗಳ ಸದಸ್ಯರ ಭಜನೆ, ಚೆಂಡೆವಾದಕರ ನಾದ ಹಾಗೂ ಗಣ್ಯರ ಜೊತೆಗೂಡುವಿಕೆಯಲ್ಲಿ ಬೆಳಗ್ಗೆ 8.30ರಿಂದ ಪಟ್ರಮೆಯಿಂದ ಶ್ರೀ ಕ್ಷೇತ್ರ ದೈವಂಗಳ ಬನ ಪಟ್ಟೂರಿಗೆ ನೂತನ ಧ್ವಜಮರವನ್ನು ಭವ್ಯ ಮೆರವಣಿಗೆಯಲ್ಲಿ ತರಲಾಗುತ್ತದೆ. ಬೆಳಿಗ್ಗೆ 9.30ಕ್ಕೆ ನೂತನ ದೈವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದ್ದು, ಬೆಳಿಗ್ಗೆ 9.45ಕ್ಕೆ ಭಕ್ತಾದಿಗಳಿಂದ “ಮುಷ್ಟಿ ಕಾಣಿಕೆ” ಸಮರ್ಪಣೆ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ದೀಪ ಪ್ರಜ್ವಲನೆಯನ್ನು ಉಳಿಯಬೀಡು ಅನುವಂಶಿಕ ಮೊತ್ತೇಸರ ನಿತೇಶ್ ಬಲ್ಲಾಳ್ ನೆರವೇರಿಸಲಿದ್ದಾರೆ. ಧಾರ್ಮಿಕ ಉಪನ್ಯಾಸವನ್ನು ಶ್ರೀಕ್ಷೇತ್ರ ನಾಳದ ವೇದಮೂರ್ತಿ ರಾಘವೇಂದ್ರ ಅಸ್ರಣ್ಣರು ನೀಡಲಿದ್ದು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತುಕ್ರಪ್ಪ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಹಾಗೂ ಸಮಾಜ ಸೇವಕರಾದ ಕಿರಣ್‌ಚಂದ್ರ ಪುಷ್ಪಗಿರಿ, ಎಕ್ಸೆಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಚೇರ್ಮನ್ ಸುಮಂತ್ ಕುಮಾರ್ ಜೈನ್, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ಶಬರಾಯ, ಯುವ ಉದ್ಯಮಿ ಗಣೇಶ ಗೌಡ ಕಲಾಯಿ, ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಅಧ್ಯಕ್ಷ ಜನಾರ್ಧನ ಗೌಡ ಕಜೆ, ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಜಾರಪ್ಪ ಗೌಡ ಸಂಕೇಶ, ಪ್ರಗತಿಪರ ಕೃಷಿಕ ಜಾರಪ್ಪ ಗೌಡ ಕುಂಡಡ್ಕ,ಅನಾರು ಟಯರ್ಸ್ ಎಂಡ್ ಸರ್ವಿಸಸ್ ಮಾಲಕ ರಾಜೀವ ಅನಾರು ಸೇರಿದಂತೆ ಇನ್ನೂ ಹಲವಾರು ಗಣ್ಯರು, ಸ್ಥಳೀಯ ಮುಖಂಡರು ಹಾಗೂ ಸಮಾಜ ಸೇವಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕೈಜೋಡಿಸುವಂತೆ ಆಡಳಿತ ಸಮಿತಿ ಅಧ್ಯಕ್ಷ ಹೇಮಂತ ಶೆಟ್ಟಿ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತುಕ್ರಪ್ಪ ಶೆಟ್ಟಿ ಹಾಗೂ ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ವಿನಂತಿಸಿದ್ದಾರೆ.



