






ಬೆಳ್ತಂಗಡಿ: ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯನ್ನು ಬಳಂಜದ ಪ್ರಸಿದ್ಧ ಅನಿಲ್ ಪಾರ್ಮ್‌ನ ಅನಿಲ್ ಬಳಂಜ ಅವರ ಪತ್ನಿ ಶೈಲಜಾ (30) ಎಂದು ಗುರುತಿಸಲಾಗಿದೆ.
ಲಭ್ಯ ಮಾಹಿತಿಯಂತೆ, ಅನಿಲ್ ಬಳಂಜ ಹಾಗೂ ಅವರ ಪತ್ನಿ ಶೈಲಜಾ ಅವರು ತಮ್ಮ ಪಾರ್ಮ್‌ನ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ತಮ್ಮ ಸೈಟ್ ಕಡೆಗೆ ತೆರಳುತ್ತಿದ್ದ ವೇಳೆ ಕನ್ನಡಿಕಟ್ಟೆ ಸಮೀಪ ಕಾರು ಮತ್ತು ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೋಲಿಸರು ಆಗಮಿಸಿ, ಕೇಸು ದಾಖಲಿಸಿಕೊಂಡಿದ್ದಾರೆ.


