ವಿವಿಧ ಸಂಭ್ರಮಾಚರಣೆಗಳಿಗೆ ಅತಿ ಕಡಿಮೆ ದರದಲ್ಲಿ ವಿಶೇಷ ಸೇವೆ







ನೆಲ್ಯಾಡಿ: ನೆಲ್ಯಾಡಿಯ ಡಿಯೋನ್ ಗ್ರೂಪ್ ಆರ್ಕೇಡ್ ಕಟ್ಟಡದಲ್ಲಿ ನೂತನವಾಗಿ ಆರಂಭಗೊಂಡಿರುವ “ಕೆ ಎಸ್ ಇವೆಂಟ್ಸ್” ಸಂಸ್ಥೆಯ ಶುಭಾರಂಭ ಸಮಾರಂಭವು ಮೇ 18ರಂದು ನಡೆಯಿತು.
ಸಂಸ್ಥೆಯ ಉದ್ಘಾಟನೆಯನ್ನು ಸಂಸ್ಥೆಯ ಮಾಲಕರ ಮಾತೃಶ್ರೀ ಸುಹಾಸಿನಿ ಅವರು ರಿಬ್ಬನ್ ಕತ್ತರಿಸಿ ದೀಪ ಬೆಳಗಿಸುವ ಮೂಲಕ ನೆರವೇರಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್. ದುರ್ಗಾ ಶ್ರೀ ಮಾತನಾಡಿ ನೆಲ್ಯಾಡಿ ಪ್ರದೇಶದಲ್ಲಿ ಪ್ರಥಮ ಬಾರಿಗೆ ಈ ರೀತಿಯ ವಿಶೇಷ ಇವೆಂಟ್ಸ್ ಸಂಸ್ಥೆ ಆರಂಭಗೊಳ್ಳುತ್ತಿರುವುದು ಸಂತಸದ ವಿಚಾರ. ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು. ಹಲವು ವರ್ಷಗಳ ಕಾಲ ಸೈನಿಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕ ಇದೀಗ ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟಿರುವ ಸಂಸ್ಥೆಯ ಮಾಲಕರ ಹೊಸ ಪ್ರಯತ್ನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ನೆಲ್ಯಾಡಿ-ಕೌಕ್ರಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ರವಿಚಂದ್ರ ಹೊಸವಕ್ಲು, ನೆಲ್ಯಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಲಾಂ ಬಿಲಾಲ್, ಕೌಕ್ರಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಉದಯ ಕುಮಾರ್ ಹಾಗೂ ಲೋಕೇಶ್ ಬಾಣಜಾಲು ಸಂದರ್ಭೋಚಿತವಾಗಿ ಮಾತನಾಡಿ ಸಂಸ್ಥೆಯ ಬೆಳವಣಿಗೆಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಉಷಾ ಜೋಯಿ, ಅಬ್ದುಲ್ ಜಬ್ಬಾರ್, ದೈಹಿಕ ಶಿಕ್ಷಕ ಮನೋಜ್, ಶ್ರೀ ವರಮಹಾಲಕ್ಷ್ಮಿ ಮಾತೃ ಭಜನಾ ಮಂಡಳಿ ಅಧ್ಯಕ್ಷೆ ಸುಪ್ರೀತಾ ರವಿಚಂದ್ರ, ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಸವಿತಾ ಸರ್ವೋತ್ತಮ ಗೌಡ, ಕೌಕ್ರಾಡಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಂಸ್ಥೆಯ ಮಾಲಕಿ ಮಂಜುಳಾ ಸ್ವಾಗತಿಸಿದರು. ಶಿಕ್ಷಕಿ ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.
ಸಂಸ್ಥೆಯ ಮಾಲಕ ಸುಜಿತ್ ಕೆ.ಎಸ್ ಮಾತನಾಡಿ, “ನಮ್ಮ ಸಂಸ್ಥೆಯಲ್ಲಿ ಹುಟ್ಟುಹಬ್ಬದ ಆಚರಣೆ, Mom-to-be ಕಾರ್ಯಕ್ರಮ, Get-Together Events, Bride-to-be ಹಾಗೂ Groom-to-be ಸಂಭ್ರಮಗಳು, ವಿವಾಹ ವಾರ್ಷಿಕೋತ್ಸವ, Midnight Celebration, Breakup Party, Baby Shower, Mehendi ಹಾಗೂ Haldi ಕಾರ್ಯಕ್ರಮಗಳು, Couple Surprise, Proposal Events, Friends Party ಸೇರಿದಂತೆ ಇನ್ನೂ ಅನೇಕ ರೀತಿಯ ಸಂಭ್ರಮಾಚರಣೆಗಳಿಗೆ ಅತಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಸೇವೆಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.


