ನೆಲ್ಯಾಡಿ ಅಲ್ ಬದ್ರಿಯಾ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಶೇರ್ ಮಾಡಿ

 

ನೆಲ್ಯಾಡಿ: “ಒಂದು ಗಿಡ ನೆಟ್ಟರೆ ನೂರು ಉಸಿರು ಉಳಿಸಿದಂತೆ” ಎಂಬ ಘೋಷಣೆಯೊಂದಿಗೆ ನೆಲ್ಯಾಡಿಯ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷ ನಾಝಿಂ ಸಾಹೇಬ್ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಪುಸ್ತಕದ ಪಾಠವಲ್ಲ, ಜೀವನದ ಪಾಠ. ಪ್ರಕೃತಿಯನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಹಸಿರು ವಾತಾವರಣ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶಾಲೆಯ ಮುಖ್ಯಶಿಕ್ಷಕಿ ಸೀಮಾ ಡೇನಿಸ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಪರಿಸರದ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು. ಪರಿಸರ ಉಳಿದರೆ ಮಾತ್ರ ನಮ್ಮ ಭವಿಷ್ಯ ಸುರಕ್ಷಿತವಾಗಿರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಭಾಷಣ, ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು ಅಲ್ಲದೆ ಪರಿಸರ ಕಾಪಾಡುವ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕಿ ರೀಲಾ ತೋಮಸ್ ಅವರು ಸ್ವಾಗತಿಸಿದರು, ಶಿಕ್ಷಕಿ ನಿಶಾ ಫಾತಿಮಾ ವಂದಿಸಿದರು.

 

Leave a Reply

error: Content is protected !!