






ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕಟ್ಟೆಮಜಲು ಕಾರ್ಯಕ್ಷೇತ್ರದ ತ್ರೈಮಾಸಿಕ ಸಭೆಯು ಪಿಎಂಶ್ರೀ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷ ಮಾರ್ಸೆಲ್ ಡಿ’ಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ನೆಲ್ಯಾಡಿ ವಲಯದ ಮೇಲ್ವಿಚಾರಕಿ ಜಯಶ್ರೀ ಅವರು ಉಪಸ್ಥಿತರಿದ್ದು, ಸಂಘಟನೆಯ ಚಟುವಟಿಕೆಗಳು, ಸದಸ್ಯರ ಜವಾಬ್ದಾರಿಗಳು ಹಾಗೂ ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಸದಸ್ಯರಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷೆಯಾಗಿ ಗೀತಾ ನೆಲ್ಯಡ್ಕ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಜೊತೆಗೆ ದಾಖಲಾತಿ ಉಪಸಮಿತಿಯ ಸದಸ್ಯರನ್ನೂ ಆಯ್ಕೆ ಮಾಡಿ ಜವಾಬ್ದಾರಿಗಳನ್ನು ಹಂಚಿಕೊಡಲಾಯಿತು.
ತ್ರೈಮಾಸಿಕ ಸಭೆಯಲ್ಲಿ ಒಕ್ಕೂಟದ ಕಾರ್ಯದರ್ಶಿ ಸಜನಿ, ಪದಾಧಿಕಾರಿಗಳಾದ ಹರೀಶ್, ಪುರಂದರ, ಉಮೇಶ್, ಸೇವಾಪ್ರತಿನಿಧಿ ಸುಮನಾ ಎಸ್. ಹಾಗೂ ಒಕ್ಕೂಟದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು, ಸಂಘಟನೆಯ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಿದರು. ಸಭೆಯು ಸದಸ್ಯರ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಯಶಸ್ವಿಯಾಗಿ ನೆರವೇರಿತು.


