ಕೊಕ್ಕಡ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ

ಶೇರ್ ಮಾಡಿ

ಶಾಲಾ ನಾಯಕಿಯಾಗಿ ಪ್ರೆಸಿಲ್ಲ, ಉಪನಾಯಕನಾಗಿ ದೀಕ್ಷಿತ್ ಆಯ್ಕೆ

 

ಕೊಕ್ಕಡ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ

ಕೊಕ್ಕಡ: ಪ್ರೌಢಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಚುನಾವಣೆ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ನಾಯಕತ್ವದ ಗುಣಗಳು ಹಾಗೂ ಜವಾಬ್ದಾರಿಯುತ ನಾಗರಿಕ ಪ್ರಜ್ಞೆಯನ್ನು ಬೆಳೆಸುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲಾಯಿತು.

ಸಮಾಜವಿಜ್ಞಾನ ಶಿಕ್ಷಕಿ ದೀಪಿಕಾ ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಮತದಾನದ ಮಹತ್ವವನ್ನು ಅರಿತುಕೊಂಡರು.

ಚುನಾವಣೆಯ ಫಲಿತಾಂಶದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಪ್ರೆಸಿಲ್ಲ ಶಾಲಾ ನಾಯಕಿಯಾಗಿ ಹಾಗೂ 9ನೇ ತರಗತಿಯ ವಿದ್ಯಾರ್ಥಿ ದೀಕ್ಷಿತ್ ಉಪನಾಯಕನಾಗಿ ಆಯ್ಕೆಯಾದರು. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಶಿಕ್ಷಕ ವೃಂದ ಹಾಗೂ ಸಹಪಾಠಿಗಳು ಅಭಿನಂದಿಸಿ, ಶಾಲೆಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉತ್ತಮ ನಾಯಕತ್ವ ನೀಡುವಂತೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ರೀನಾ ಅವರು ಮಾತನಾಡಿ, ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು, ಜವಾಬ್ದಾರಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಬೀನಾ ಹಾಗೂ ಶಿಕ್ಷಕಿಯರಾದ ರೂಪ, ದೀಪಿಕಾ, ಪವಿತ್ರ, ಚಿತ್ರಲೇಖ ಮತ್ತು ಶಾಹಿದ ಅವರು ಸಹಕಾರ ನೀಡಿ ಚುನಾವಣಾ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಿಕೊಟ್ಟರು.

 

Leave a Reply

error: Content is protected !!