







ಬೆಳ್ತಂಗಡಿ :ಬುರುಡೆ ಪ್ರಕರಣದ ಎಸ್ ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ ಘಟನೆ ಮಂಗಳವಾರ ನಡೆದಿದೆ.
ಬೆಳ್ತಂಗಡಿ ಎಸ್ ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್, ಇನ್ಸ್ ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಪಿಸಿ ಮಂಜುನಾಥ್, ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ ಬುರುಡೆ ಪ್ರಕರಣದ ಚಿನ್ನಯ್ಯ ಹೈಕೋರ್ಟ್ ರಿಟ್ ಪಿಟಿಷನ್ ಹಾಕಿರುವ ಬಗ್ಗೆ ಮಾತುಕತೆ ನಡೆಸಲು ತೆರಳುತ್ತಿದ್ದಾಗ ಜೂ. 16 ರಂದು ಮಧ್ಯಾಹ್ನ ಚಾರ್ಮಾಡಿಯಲ್ಲಿ ಇನೋವಾ ಕಾರು ಪಲ್ಟಿಯಾಗಿದೆ.
ಇನೋವಾ ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯವಾಗಿಲ್ಲ.ಇನೋವಾ ಕಾರು ದಿಬ್ಬಕ್ಕೆ ಗುದ್ದಿ ಪಲ್ಟಿಯಾದ ರಭಸಕ್ಕೆ ಹಾನಿಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



