ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

ಶೇರ್ ಮಾಡಿ

 

ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಮನಶಾಸ್ತ್ರ ಉಪನ್ಯಾಸಕಿ ನಮಿತಾ ಕೆ.ಆರ್. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಅದರ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಯುವಜನತೆ ತಂಬಾಕು ಸೇವನೆಯ ಚಟದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳು ತಂಬಾಕು ಸೇವನೆಯಿಂದ ದೂರವಿರಲು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಗೀತಾ ಅವರು ವಿದ್ಯಾರ್ಥಿಗಳಿಗೆ ತಂಬಾಕು ಸೇವನೆ ಮಾಡದಿರಲು ಹಾಗೂ ಸಮಾಜದಲ್ಲಿಯೂ ತಂಬಾಕು ವಿರೋಧಿ ಜಾಗೃತಿ ಮೂಡಿಸಲು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿವಿಧ ಜಾಗೃತಿ ಚಟುವಟಿಕೆಗಳು, ಸ್ಪರ್ಧೆಗಳು ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

ಪ್ರಾಪ್ತಿ ಸ್ವಾಗತಿಸಿದರು,ವಿದ್ಯಾರ್ಥಿನಿ ವೃಂದಾ ಕಾರ್ಯಕ್ರಮ ನಿರೂಪಿಸಿದರು, ನಿರ್ಮಲಾ ವಂದಿಸಿದರು.

 

Leave a Reply

error: Content is protected !!