ಕಡಬ: ಕಿರಣ್ ಮಹಿಳಾ ತಾಲೂಕು ಒಕ್ಕೂಟ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಶೇರ್ ಮಾಡಿ

 

ಕಡಬ: ಕಿರಣ್ ಮಹಿಳಾ ತಾಲೂಕು ಒಕ್ಕೂಟ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಕಡಬ: ಕಿರಣ್ ಮಹಿಳಾ ತಾಲೂಕು ಒಕ್ಕೂಟ(ರಿ.)ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ ಕಾರ್ಯಕ್ರಮವು ಕುಟ್ರುಪ್ಪಾಡಿ ಚರ್ಚ್ ಸಭಾಂಗಣದಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಡೈಸಿ ಜೋಯ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ನಿಕಟಪೂರ್ವ ನಿರ್ದೇಶಕರಾದ ವಂ.ಫಾದರ್ ಬಿನೋಯ್ ಎ.ಜೆ. ಅವರು ಮಹಿಳಾ ಒಕ್ಕೂಟಗಳು ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಪರಿಸರ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅಭಿವೃದ್ಧಿಯತ್ತ ಸಾಗಬೇಕು ಎಂದು ಕರೆ ನೀಡಿದರು. ಜೊತೆಗೆ ಸಂಘಟನೆಯ ಪದಾಧಿಕಾರಿಗಳ ಪಾತ್ರ, ಜವಾಬ್ದಾರಿಗಳು ಹಾಗೂ ಸಮರ್ಥ ನಾಯಕತ್ವದ ಮಹತ್ವದ ಕುರಿತು ವಿವರವಾದ ಮಾಹಿತಿ ನೀಡಿದರು.

ಸಭೆಯಲ್ಲಿ 2026ರಿಂದ 2029ರ ಅವಧಿಗೆ ಕಿರಣ್ ಮಹಿಳಾ ತಾಲೂಕು ಒಕ್ಕೂಟದ ನೂತನ ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಅಧ್ಯಕ್ಷೆಯಾಗಿ ಉಷಾ ಜೋಯ್, ಉಪಾಧ್ಯಕ್ಷೆಯಾಗಿ ಶೈಲಾ ಜೋಸೆಫ್, ಕಾರ್ಯದರ್ಶಿಯಾಗಿ ಡೈಸಿ ಜೋಯ್, ಜೊತೆ ಕಾರ್ಯದರ್ಶಿಯಾಗಿ ಚಂದನಾ ಹಾಗೂ ಕೋಶಾಧಿಕಾರಿಯಾಗಿ ಪ್ರಿನ್ಸಿ ಆಯ್ಕೆಯಾದರು.

ಸಮಿತಿ ಸದಸ್ಯರಾಗಿ ಸೂಸಮ್ಮ, ಎಲಿಯಮ್ಮ, ಮೇರಿ ವರ್ಗೀಸ್, ರಜನಿ ಹಾಗೂ ವಲ್ಸಮ್ಮ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಿ.ಕೆ.ಆರ್.ಡಿ.ಎಸ್. ಸಂಸ್ಥೆಯ ನಿರ್ದೇಶಕರಾದ ವಂ.ಫಾದರ್ ಆದರ್ಶ್ ಪಿ.ಎಸ್. ಅವರು ಎಸ್.ಐ.ಆರ್. ಯೋಜನೆಯ ಕುರಿತು ಮಾಹಿತಿ ನೀಡಿದರು. ಕಳೆದ ಮೂರು ವರ್ಷಗಳ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿಂದಿನ ಸಮಿತಿ ಸದಸ್ಯರನ್ನು ಅಭಿನಂದಿಸಿ ಗೌರವಿಸಲಾಯಿತು. ಬಳಿಕ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.

ಮೇರಿ ವರ್ಗೀಸ್ ಸ್ವಾಗತಿಸಿ, ಪ್ರಿನ್ಸಿ ಕಾರ್ಯಕ್ರಮ ನಿರೂಪಿಸಿದರು, ಉಷಾ ವಂದಿಸಿದರು. ಒಕ್ಕೂಟದ ಸುಮಾರು 60 ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

Leave a Reply

error: Content is protected !!