







ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ಐತ್ತೂರು ವಲಯದ 102 ನೆಕ್ಕಿಲಾಡಿ ಕಾರ್ಯಕ್ಷೇತ್ರದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರ್ಮಾಯಿಯಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನೆಡುವಿಕೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಭವಾನಿ ಶಂಕರ್ ವಹಿಸಿದ್ದರು. ಕೃಷಿ ಮೇಲ್ವಿಚಾರಕರಾದ ಸೋಮೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಪರಿಸರ ಜಾಗೃತಿಯ ಅಗತ್ಯತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಇಂದಿರಾವತಿ, 102 ನೆಕ್ಕಿಲಾಡಿ ಒಕ್ಕೂಟದ ಸದಸ್ಯೆ ಶಾಂತಾ, ಸೇವಾಪ್ರತಿನಿಧಿ ಜ್ಞಾನಸೇಲ್ವಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವಿದ್ಯಾರ್ಥಿ ಹಿತೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಕೈಯಿಂದಲೇ ಶಾಲಾ ಆವರಣದಲ್ಲಿ ಗಿಡ ನೆಡಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಹಾಗೂ ವಿಶೇಷ ಚೇತನವುಳ್ಳ ವ್ಯಕ್ತಿಗಳೊಂದಿಗೆ ಸಂವಹನ ಕಾರ್ಯಕ್ರಮಗಳನ್ನು ನಡೆಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಮುಖ್ಯಶಿಕ್ಷಕಿ ಇಂದಿರಾವತಿ ಅವರು ಸ್ವಾಗತಿಸಿದರು. ಸಹ ಶಿಕ್ಷಕಿ ಮೋಹಿನಿ ಎನ್. ವಂದಿಸಿದರು. ಅತಿಥಿ ಶಿಕ್ಷಕಿ ವಾಣಿಶ್ರೀ ಹಾಗೂ ಸಹ ಶಿಕ್ಷಕಿ ಅನಿತಾ ವೈ. ಕಾರ್ಯಕ್ರಮ ನಿರೂಪಿಸಿದರು. ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.



