









ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜೂ.26ರಂದು ಶುಕ್ರವಾರ ಬೆಳಿಗ್ಗೆ 9 ಗಂಟೆಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.
ದೇವಳದ ಗೌರವಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಅವರ ಕೃಪಾಶೀರ್ವಾದದೊಂದಿಗೆ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಶ್ರೀಧರ ನೂಜಿನ್ನಾಯರ ಅವರ ಪೌರೋಹಿತ್ಯದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಲಿವೆ.
ಸಾಮೂಹಿಕ ಪೂಜೆಯಲ್ಲಿ ಭಾಗವಹಿಸುವ ಭಕ್ತರು ರೂ.150 ಪಾವತಿಸಿ ರಶೀದಿ ಪಡೆದು ಹೆಸರು ನೋಂದಾಯಿಸಿ ಕೊಳ್ಳ ಬಹುದಾಗಿದೆ. ಪೂಜೆಯ ವ್ರತಧಾರಿಗಳು ಒಂದು ಲೋಟ ಹಾಗೂ ಒಂದು ಚಮಚವನ್ನು ತರಬೇಕಿದ್ದು, ಬೆಳಿಗ್ಗೆ 8.30ರೊಳಗೆ ದೇವಸ್ಥಾನದಲ್ಲಿ ಹಾಜರಿರುವಂತೆ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಭಕ್ತಾದಿಗಳು ನೀಡುವ ಬಾಳೆ ಎಲೆ, ಹೂವು, ಹಿಂಗಾರ ಸೇರಿದಂತೆ ವಿವಿಧ ಪೂಜಾ ಸಾಮಗ್ರಿಗಳನ್ನು ಕೃತಜ್ಞತಾಪೂರ್ವಕವಾಗಿ ಸ್ವೀಕರಿಸಲಾಗುವುದು. ಪೂಜೆಗೆ ಸಂಬಂಧಿಸಿದ ಕಾಣಿಕೆ ಅಥವಾ ಮೊತ್ತವನ್ನು ಗೂಗಲ್ ಪೇ ಮೂಲಕ 6366854899 ಸಂಖ್ಯೆಗೆ ಪಾವತಿಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಈ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತೀರ್ಥಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಅಧ್ಯಕ್ಷ ರವಿಚಂದ್ರ ಹೊಸವಕ್ಲು, ಕಾರ್ಯದರ್ಶಿ ರಾಕೇಶ್, ಪದಾಧಿಕಾರಿಗಳು, ಅರ್ಚಕರು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಭಕ್ತರಲ್ಲಿ ಮನವಿ ಮಾಡಿದ್ದಾರೆ.



